ಕಮಲದ ವಿರುದ್ಧ ಕಾಂಗ್ರೆಸ್ 'ಆಪರೇಷನ್ ಹಸ್ತ'
|
|
|
|
ಮಂಗಳೂರು, ಸೋಮವಾರ, 1 ಸೆಪ್ಟೆಂಬರ್ 2008( 11:36 IST )
|
|
|
|
|
|
|
|
ಸ್ಥಿರ ಸರ್ಕಾರಕ್ಕಾಗಿ ಬಿಜೆಪಿ ಕೈಗೊಂಡಿರುವ ಆಪರೇಷನ್ ಕಮಲದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಆಪರೇಷನ್ ಹಸ್ತ ಆರಂಭಿಸಲು ನಿರ್ಧರಿಸಿದೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಎಂ. ವೀರಪ್ಪ ಮೊಯ್ಲಿ, ಸ್ವ ಶಕ್ತಿಯಿಂದ ಅಧಿಕಾರಕ್ಕೆ ಬರಲು ಬಿಜೆಪಿಗೆ ಸಾಧ್ಯವಾಗಿಲ್ಲ.
ಈಗ ಆಪರೇಷನ್ ಕಮಲದ ಮೂಲಕ ಇತರ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷವೇನಾದರೂ ಆಪರೇಷನ್‌ಗಿಳಿದರೆ ನಿಸ್ಸಂದೇಹವಾಗಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಆದರೆ ಕಾಂಗ್ರೆಸ್ ಶಾಸಕರ 'ಆಪರೇಷನ್' ಮಾಡುವುದಿಲ್ಲ. ಜನರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷವನ್ನು ಬಲಪಡಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರಸ್ತುತ ಸನ್ನಿವೇಶದಲ್ಲಿ ಪ್ರತಿಯೊಂದು ಪಕ್ಷಗಳು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಅವರು ಹೇಳಿದರು.
|
|
|
|