ಕೆಪಿಸಿಸಿ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಖರ್ಗೆ
|
|
|
|
ಹುಬ್ಬಳ್ಳಿ, ಸೋಮವಾರ, 1 ಸೆಪ್ಟೆಂಬರ್ 2008( 14:03 IST )
|
|
|
|
|
|
|
|
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹವರೇ ಅಧ್ಯಕ್ಷರಾಗಿ ಆಯ್ಕೆಯಾಗಬೇಕೆಂಬ ಒತ್ತಾಯವನ್ನು ಹೈಕಮಾಂಡ್ ಮೇಲೆ ಹೇರಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹೈಕಮಾಂಡ್ ಅರ್ಹರನ್ನೇ ಆಯ್ಕೆ ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಇದೇ ವೇಳೆ ಜೆಡಿಎಸ್‌ನೊಂದಿಗೆ ಮೈತ್ರಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಕುರಿತು ಯಾವುದೇ ನಿರ್ಧಾರವಾಗಿಲ್ಲ. ಈ ಕುರಿತಂತೆ ಹೈಕಮಾಂಡ್‌ನಿಂದ ಯಾವುದೇ ಸೂಚನೆ ಬಂದಿಲ್ಲ ಎಂದರು.
ಈ ನಡುವೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ನಡೆಯುತ್ತಿರುವ ಬೆಳವಣಿಗೆ ಬೆನ್ನಲ್ಲೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಬುಲಾವ್ ನೀಡಿರುವುದು ಕೆಪಿಸಿಸಿ ಕಚೇರಿಯಲ್ಲಿ ಅಸಮಾಧಾನ ಮೂಡಿದೆ.
ವಲಸಿಗರು ಹಾಗೂ ಮೂಲ ಕಾಂಗ್ರೆಸ್ಸಿಗರ ನಡುವೆ ನಡೆಯುತ್ತಿರುವ ಜಗಳಕ್ಕೆ ಇದು ಮತ್ತೊಮ್ಮೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ಹಿರಿಯ ನಾಯಕರು ಗೌಪ್ಯ ಸ್ಥಳದಲ್ಲಿ ಸಮಾಲೋಚನೆ ನಡೆಸುತ್ತಿದ್ದಾರೆ.
|
|
|
|