ಉಪಚುನಾವಣೆ-ಸರ್ಕಾರ ಹಣ ಬಿಡುಗಡೆಗೆ ಜೆಡಿಎಸ್ ಆಕ್ಷೇಪ
|
|
|
|
ಬೆಂಗಳೂರು, ಸೋಮವಾರ, 1 ಸೆಪ್ಟೆಂಬರ್ 2008( 20:52 IST )
|
|
|
|
|
|
|
|
ವಿಧಾನಸಭಾ ಉಪಚುನಾವಣೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಂವಿಧಾನ ಬಾಹಿರವಾಗಿ ಹಣ ಬಿಡುಗಡೆ ಮಾಡಿರುವ ವಿರುದ್ಧ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಸೋಮವಾರ ನಗರದಲ್ಲಿ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ, ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ತಮ್ಮ ಪಕ್ಷಕ್ಕೆ ಸೇರಿರುವ ಶಾಸಕರನ್ನು ಚುನಾ ವಣೆಯಲ್ಲಿ ಗೆಲ್ಲಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ. ಇದರ ವಿರುದ್ಧ ಜೆಡಿಎಸ್ ಕಾನೂನು ಸಮರ ಹೂಡುವುದಾಗಿ ತಿಳಿಸಿದ್ದಾರೆ.
ಸಂವಿಧಾನ ಬಾಹಿರವಾಗಿ ಜೆಡಿಎಸ್ ನೂರಾರು ಕೋಟಿ ರೂ. ಹಣ ಮಂಜೂರು ಮಾಡಲಾಗಿದ್ದು, ಇದರ ವಿರುದ್ಧ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಕ್ರಮವನ್ನು ಕೈಗೊಳ್ಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಪ್ರಯಾಣ ದರ ಹೆಚ್ಚಳ-ಪ್ರತಿಭಟನೆ:
ಈ ನಡುವೆ ಬಸ್ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಏಕಾಏಕಿ ಏರಿಸಲಾಗಿರುವ ಬಸ್ ಪ್ರಯಾಣದರವನ್ನು ಕೂಡಲೇ ಕಡಿತಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
|
|
|
|