ರಾಜ್ಯದಲ್ಲಿ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದ್ದರು ಅದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದ ಮಾಜಿ ಸಚಿವ ವಿಶ್ವನಾಥ್, ಯಡಿಯೂರಪ್ಪ ಕೈಲಾಗದ ಮುಖ್ಯಮಂತ್ರಿ ಎಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಗೊಂದಲ ಆರಂಭವಾಗಿದೆ. ಕಳೆದ ಬಾರಿ ರಸಗೊಬ್ಬರ ಸಮಸ್ಯೆ ಯನ್ನು ಸೃಷ್ಟಿಸಿ ರೈತರನ್ನು ಬಲಿ ತೆಗೆದುಕೊಂಡಿತು. ಈ ಬಾರಿ ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತೀಯ ಸಂಘರ್ಷವನ್ನು ಹುಟ್ಟು ಹಾಕಿ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸುತ್ತಿದೆ.
ದಿನದಿಂದ ದಿನಕ್ಕೆ ಪರಿಣಾಮ ತೀವ್ರತೆಯನ್ನು ಪಡೆಯುತ್ತಿದ್ದರೂ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮತಾಂತವರವನ್ನು ಆಕ್ಷೇಪಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆಯೇ ಹೊರತು, ಕೋಮುಗಲಭೆಯನ್ನು ನಿಯಂತ್ರಿಸುವತ್ತ ಗಮನಹರಿಸುತ್ತಿಲ್ಲ ಎಂದರು.
ಮಂಗಳೂರು ಗಲಭೆ ಈಗ ಸರ್ಕಾರವನ್ನು ಅಲ್ಲಾಡಿಸಲು ಪ್ರತಿಪಕ್ಷಗಳಿಗೆ ಆಯುಧ ಸಿಕ್ಕಂತಾಗಿದೆ. ಮಂಗಳವಾರ ಮಂಗಳೂರಿಗೆ ಭೇಟಿ ನೀಡಿದ ಖರ್ಗೆ, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು.
|