ರಾಜ್ಯದ ವಿವಿಧೆಡೆಗಳಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಶ್ರೀರಾಮ ಸೇನಾ, ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಹೈದರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಯಾವ ಸಂಘಟನೆಗಳ ನಿಷೇಧ ಪ್ರಸ್ತಾವನೆ ಇಲ್ಲ. ಆದರೆ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ನೋಡುತ್ತಾ ಕುಳಿತುಕೊಳ್ಳಲಾಗದು ಎಂದು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಕರಾವಳಿ ಜಿಲ್ಲೆಗಳಲ್ಲಿ ಮತಾಂತರದ ನಡೆಯುತ್ತಿದೆ ಎಂಬ ವರದಿ ಬಂದಿದೆ ಎಂದರು.
ರಾಜ್ಯದ ಹಲವೆಡೆಗಳಲ್ಲಿ ಮತಾಂತರಕ್ಕೆ ವಿದೇಶಿ ಹಣ ಬಳಕೆಯಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ. ಈ ಕುರಿತಾದ ಮಾಹಿತಿ ಪಡೆಯಲು ತನಿಖೆ ಚುರುಕುಗೊಳಿಸಲಾಗುತ್ತದೆ ಎಂದು ಅವರು ಹೇಳಿದರು.
|