ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಭಜರಂಗದಳ ನಿಷೇಧಕ್ಕೆ ಧರಂಸಿಂಗ್ ಒತ್ತಾಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಜರಂಗದಳ ನಿಷೇಧಕ್ಕೆ ಧರಂಸಿಂಗ್ ಒತ್ತಾಯ
ರಾಜ್ಯದ ಹಲವೆಡೆಗಳಲ್ಲಿ ಪ್ರಾರ್ಥನಾ ಮಂದಿರದ ಮೇಲಿನ ದಾಳಿಯಿಂದ ಗಲಭೆಗೆ ಕಾರಣರಾದ ಭಜರಂಗದಳ ಸಂಘಟನೆಗಳನ್ನು ನಿಷೇಧಿಸಬೇಕೆಂದು ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಆಗ್ರಹಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮಂಗಳೂರಿನಲ್ಲಿ ಪ್ರಾರ್ಥನಾ ಮಂದಿರದ ಮೇಲೆ ನಡೆದಿರುವ ದಾಳಿಯಲ್ಲಿ ಭಜರಂಗದಳದ ಕೈವಾಡವಿರುವುದು ತಿಳಿದಿರುವ ವಿಚಾರವಾಗಿದೆ. ಈ ನಿಟ್ಟಿನಲ್ಲಿ ಈ ಸಂಘಟನೆಯನ್ನು ನಿಷೇಧಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಈ ಘಟನೆಗೆ ಗೃಹ ಸಚಿವರ ಕುಮ್ಮಕ್ಕು ಇರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ ಅವರು, ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಮತ್ತಷ್ಟು
ನ್ಯೂಲೈಫ್‌‌ನಿಂದ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ: ಬಿಶಪ್
ಸಂಘಪರಿವಾರ ನಿಷೇಧವಿಲ್ಲ:ಸಿಎಂ
ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಪೊಲೀಸ್ ಬಲೆಗೆ?
ಅತುಲ್ ವಿವರಣೆ:ಪದ್ಮಪ್ರಿಯ ಪ್ರಕರಣಕ್ಕೆ ಹೊಸ ತಿರುವು
ಯಡಿಯೂರಪ್ಪ ಕೈಲಾಗದ ಮುಖ್ಯಮಂತ್ರಿ: ವಿಶ್ವನಾಥ್
ಬೆಂಗಳೂರು: 7 ದರೋಡೆಕೋರರ ಬಂಧನ