ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಪ್ರಾರ್ಥನಾ ಮಂದಿರಗಳ ಮೇಲೆ ನಡೆದಿರುವ ದಾಳಿಯನ್ನು ಸಿಓಡಿ ತನಿಖೆಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾರ್ಥನಾ ಮಂದಿರಗಳ ಮೇಲೆ ನಡೆದಿರುವ ಗಲಭೆ ಆಘಾತವನ್ನುಂಟು ಮಾಡಿದೆ. ಪ್ರಾರ್ಥನಾ ಮಂದಿರಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದ್ದು, 2 ತಿಂಗಳೊಳಗೆ ಪ್ರಕರಣದ ಕುರಿತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
|