ಕರಾವಳಿಯಲ್ಲಿ ನಡೆದಿರುವ ಕೋಮುಗಲಭೆ ಕುರಿತಾಗಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಘಟನೆಯ ಕುರಿತು ಕಾಂಗ್ರೆಸ್ ಸತ್ಯ ಶೋಧನ ಸಮಿತಿಯ ನೇತೃತ್ವ ವಹಿಸಿರುವ ಅವರು ಗುರುವಾರ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಈ ಘಟನೆಯ ಬಳಿಕ ಗಾಯಗೊಂಡವರ ವಿಚಾರಣೆ ನಡೆಸುವ ಮಾನವೀಯತೆಯನ್ನು ಗೃಹ ಸಚಿವರು ತೋರಿಲ್ಲ ಎಂದು ಆರೋಪಿಸಿದ ಅವರು, ಈ ಕುರಿತು ಸಮಗ್ರ ವರದಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಾಗಿದೆ. ಶೀಘ್ರದಲ್ಲಿಯೇ ಈ ಕುರಿತಾದ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ, ನ್ಯೂ ಲೈಫ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
|