ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗಲಭೆಗೆ ಬಿಜೆಪಿ ಕುಮ್ಮಕ್ಕು: ಕಾಗೋಡು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗಲಭೆಗೆ ಬಿಜೆಪಿ ಕುಮ್ಮಕ್ಕು: ಕಾಗೋಡು
ರಾಜ್ಯದ ವಿವಿಧೆಡೆಗಳಲ್ಲಿ ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು,ಘಟನೆಗೆ ಬಿಜೆಪಿ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆಪಾದಿಸಿದ್ದಾರೆ.

ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದೂಪರ ಸಂಘಟನೆಗಳು ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಲು ರಾಜ್ಯದ ಬಿಜೆಪಿ ಸರ್ಕಾರ ಕೈಜೋಡಿಸಿದೆ ಎಂದು ಆರೋಪಿಸಿದರು.

ಕ್ರೈಸ್ತ ಸಮುದಾಯದಲ್ಲಿ ಯಾರೋ ಒಬ್ಬರು ಮಾಡಿದ ಪ್ರಮಾದಕ್ಕಾಗಿ ಇಡೀ ಕ್ರೈಸ್ತ ಸಮುದಾಯದ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ಇದರಿಂದ ರಾಜ್ಯದ ಕ್ರೈಸ್ತ ಸಮುದಾಯ ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಈಗಾಗಲಾದರೂ ಈ ಘಟನೆಯಿಂದ ಎಚ್ಚೆತ್ತುಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ಮತ್ತಷ್ಟು
ಗಲಭೆ ನಿಷ್ಪಕ್ಷಪಾತ ತನಿಖೆಗೆ ಪ್ರಕಾಶ್ ಆಗ್ರಹ
ಪ್ರಾರ್ಥನಾ ಮಂದಿರ ದಾಳಿ ಸಿಓಡಿ ತನಿಖೆಗೆ: ಸಿಎಂ
ಭಜರಂಗದಳ ನಿಷೇಧಕ್ಕೆ ಧರಂಸಿಂಗ್ ಒತ್ತಾಯ
ನ್ಯೂಲೈಫ್‌‌ನಿಂದ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ: ಬಿಶಪ್
ಸಂಘಪರಿವಾರ ನಿಷೇಧವಿಲ್ಲ:ಸಿಎಂ
ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಪೊಲೀಸ್ ಬಲೆಗೆ?