ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ:ಕುಮಾರಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ:ಕುಮಾರಸ್ವಾಮಿ
ರಾಜ್ಯಾದ್ಯಂತ ಜನಸಾಮಾನ್ಯರು ಹಾಗೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಬಿಜೆಪಿ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಗುರುವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆಗಳಲ್ಲಿ ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ಹಾಗೂ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳಿನಿಂದ ನಿರಂತರವಾಗಿ ರಾಜ್ಯಾದ್ಯಂತ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯದ 29 ಜಿಲ್ಲೆಗಳಲ್ಲಿಯೂ ರಾಜ್ಯ ಸರ್ಕಾರದ ದುರಾಡಳಿತ ಖಂಡಿಸಿ ಪ್ರತಿಭಟನೆ ನಡೆಸಲಿದ್ದು, ಮುಂದಿನ ತಿಂಗಳು 2 ರಿಂದ 3ನೇ ಹಂತದ ಪ್ರತಿಭಟನೆ ಪ್ರಾರಂಭಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ ಅರಾಜಕತೆಯನ್ನು ತಪ್ಪಿಸುವ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದ ಅವರು, ರಾಜ್ಯಕ್ಕೆ ಅಗತ್ಯ ಸಲಹೆ ನೀಡಬೇಕೆಂದು ಒತ್ತಾಯಿಸಿದರು.

ಸಂಘ ಪರಿವಾರದವರು ಬಿಜೆಪಿ ಮೂಲಕ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಕುಮಾರಸ್ವಾಮಿ, ಶೀಘ್ರವೆ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.
ಮತ್ತಷ್ಟು
ಗಲಭೆಗೆ ಬಿಜೆಪಿ ಕುಮ್ಮಕ್ಕು: ಕಾಗೋಡು
ಗಲಭೆ ನಿಷ್ಪಕ್ಷಪಾತ ತನಿಖೆಗೆ ಪ್ರಕಾಶ್ ಆಗ್ರಹ
ಪ್ರಾರ್ಥನಾ ಮಂದಿರ ದಾಳಿ ಸಿಓಡಿ ತನಿಖೆಗೆ: ಸಿಎಂ
ಭಜರಂಗದಳ ನಿಷೇಧಕ್ಕೆ ಧರಂಸಿಂಗ್ ಒತ್ತಾಯ
ನ್ಯೂಲೈಫ್‌‌ನಿಂದ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ: ಬಿಶಪ್
ಸಂಘಪರಿವಾರ ನಿಷೇಧವಿಲ್ಲ:ಸಿಎಂ