ರಾಜ್ಯದ 8 ವಿಧಾನಸಭಾ ಉಪಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳು ಒಟ್ಟುಗೂಡಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡಬೇಕೆಂದು ಮಾಜಿ ಮುಖ್ಯಮಂತ್ರಿ,ಸಮಾಜವಾದಿ ಪಕ್ಷದ ನಾಯಕ ಎಸ್.ಬಂಗಾರಪ್ಪ ಅವರು ಕರೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ಅವರು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಗಲಭೆಗೆ ಬಿಜೆಪಿ ಹೊಣೆ: ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಬಂಗಾರಪ್ಪ ತಿಳಿಸಿದ್ದಾರೆ.
ಬಿಜೆಪಿಯಡಿ ಸಂಘ ಪರಿವಾರ, ಭಜರಂಗದಳ ಅವ್ಯಾಹತವಾಗಿ ಕ್ರೈಸ್ತರ ಪ್ರಾರ್ಥನಾ ಮಂದಿರಗಳ ಮೇಲೆ ಹಲ್ಲೆ ನಡೆಸುತ್ತಿದ್ದು, ಇದಕ್ಕೆ ಬಿಜೆಪಿ ನಾಯಕರ ಕೈವಾಡವಿದೆ ಎಂದು ಹೇಳಿದರು.
ಬಿಜೆಪಿ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಪರೋಕ್ಷವಾಗಿ ಪ್ರೋತ್ಸಾಹ ನೀಡುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅವರು ಆಪಾದಿಸಿದರು.
ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಂಗಾರಪ್ಪ, ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
|