ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಯೋಜನೆಗೆ ಹೆಚ್ಚುವರಿಯಾಗಿ ಭೂಮಿ ನೀಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಇದೀಗ ನೈಸ್ ಮುಖ್ಯಸ್ಥ ಖೇಣಿ ವಿರುದ್ಧ ತಿರುಗಿ ಬಿದ್ದಿದೆ.
ರಾಜ್ಯ ಸರ್ಕಾರ ನೈಸ್ ಸಂಸ್ಥೆಗೆ ಯೋಜನೆಯ ವ್ಯಾಪ್ತಿಯಲ್ಲಿ ಹೆಚ್ಚುವರಿ ಜಮೀನು ನೀಡಲಾಗಿದೆ ಎಂದು ಸುಪ್ರೀಂಕೋರ್ಟ್‌ಗೆ ಅಫಿಡವಿತ್ಸಲ್ಲಿಸಿರುವುದು ಖೇಣಿ-ಯಡಿಯೂರಪ್ಪ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ.
ಈ ಯೋಜನೆಯ ಮೂಲ ಒಪ್ಪಂದದ ಪ್ರಕಾರ, ನೈಸ್ ಕಂಪೆನಿಗೆ ಸರ್ಕಾರ ಭೂಮಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ತೀರ್ಪಿನ ಹಿನ್ನೆಲೆಯಲ್ಲಿ ಖೇಣಿ ಅವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿಗಳು, ಭೂಮಿ ನೀಡುವುದಾಗಿ ತಿಳಿಸಿದ್ದರು.
ಆದರೆ ಆ ಬಳಿಕ ಲೋಕೋಪಯೋಗಿ ಇಲಾಖೆಯು ಸುಪ್ರೀಂಗೆ ಅಫಿಡವಿತ್ ಸಲ್ಲಿಸುವಾಗ ನೈಸ್ ಕಂಪೆನಿಗೆ ಹೆಚ್ಚುವರಿ ಜಮೀನು ನೀಡಲಾಗಿದೆ ಎಂದು ಅರ್ಜಿ ಸಲ್ಲಿಸಿದ್ದಾರೆ. ಇದ ನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿಗಳು ಹೆಚ್ಚುವರಿ ಜಮೀನು ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
|