ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ಬೆಳಗಾವಿ-ಬೆಳಗಾಂ': ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ಬೆಳಗಾವಿ-ಬೆಳಗಾಂ': ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
NRB
ಬೆಳಗಾಂ-ಬೆಳಗಾವಿ ಹೆಸರಿನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಮತ್ತು ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ ನೋಟಿಸ್ ಜಾರಿ ಮಾಡಿದೆ.

ಇದೀಗ ಇಂಗ್ಲಿಷ್‌ನಲ್ಲಿ ಬಳಕೆಯಾಗುತ್ತಿರುವ ಬೆಳಗಾಂ ಶಬ್ಲವವನ್ನು ಬೆಳಗಾವಿ ಮಾಡವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ಶಿಫಾರಸನ್ನು ವಿರೋಧಿಸಿ ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಶಿಫಾರಸಿನ ಹಿಂದೆ ರಾಜಕೀಯ ದುರುದ್ದೇಶ ಇದೆ. ಬೆಳಗಾವಿ ಜಿಲ್ಲೆಗೂ ಮರಾಠಿಗರು ಇರುವ ತಲತಲಾಂತರದ ಬೇರನ್ನು ಬುಡ ಸಹಿತ ಕಿತ್ತು ಹಾಕಲು ಈ ತಂತ್ರ ಮಾಡಲಾಗಿದೆ ಎಂದು ಎಂ.ವಿ.ಚವಾಣ್,ಬಾಳಾ ಸಾಹೇಬ್ ಕಾಕಡ್ಕರ್ ಹಾಗೂ ಇತರರು ಆರೋಪಿಸಿದ್ದಾರೆ.

ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು, ಮೈಸೂರು, ಬೆಳಗಾವಿ, ಶಿವಮೊಗ್ಗ, ಬಳ್ಳಾರಿ ಸೇರಿದಂತೆ ಒಟ್ಟು 12ಪಟ್ಟಣಗಳ ಹೆಸರುಗಳ ಬದಲಾವಣೆಗೆ 2006ರ ಅಕ್ಟೋಬರ್ 27ರಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಕಳುಹಿಸಿತ್ತು.

ಇದಕ್ಕೆ ಸಂಬಂಧಿಸಿದಂತೆ 2007ರ ಆಗಸ್ಟ್ 27ರಂದು ಬೆಳಗಾಂ ಹೆಸರನ್ನು ಬದಲಾಯಿಸದಂತೆ ತಾವು ಕೋರಿದ್ದರೂ ಸರ್ಕಾರ ಅದನ್ನು ಪರಿಗಣಿಸಲಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.
ಮತ್ತಷ್ಟು
ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ
ಹೈವೇ ಯೋಜನೆಗೆ ಹೆಚ್ಚುವರಿ ಭೂಮಿ ಇಲ್ಲ: ಸಿಎಂ
ಕೋಮುವಾದಿಗಳ ವಿರುದ್ಧ ಒಗ್ಗೂಡಬೇಕು: ಬಂಗಾರಪ್ಪ
ಚಿಕ್ಕಮಗಳೂರಿನಲ್ಲಿ ಮತ್ತೆ ದಾಳಿ
ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ:ಕುಮಾರಸ್ವಾಮಿ
ಗಲಭೆಗೆ ಬಿಜೆಪಿ ಕುಮ್ಮಕ್ಕು: ಕಾಗೋಡು