ಬೆಂಗಳೂರು: ರಾಜ್ಯ ಸರ್ಕಾರ ಸಂವಿಧಾನ ಬಾಹಿರ ಕೃತ್ಯಗಳಲ್ಲಿ ತೊಡಗಿದ್ದು, ಸರ್ಕಾರವನ್ನು ವಜಾ ಮಾಡುವುದೇ ಸೂಕ್ತ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.
ರಾಜ್ಯದಲ್ಲಿ ನಡೆದಿರುವ ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ಭಜರಂಗ ದಳದ ಕೃತ್ಯವಾಗಿದೆ. ಮೇಲಿಂದ ಮೇಲೆ ನಡೆಯುತ್ತಿರುವ ದಾಳಿ ಇದನ್ನು ಸಾಬೀತುಪಡಿಸಿದೆ.
ದಾಳಿ ತಡೆದು ಸಾಮಾಜಿಕ ಸಾಮರಸ್ಯ ಸ್ಥಾಪಿಸುವಲ್ಲಿ ಸರ್ಕಾರ ಆಸಕ್ತಿ ತೋರಿಲ್ಲ. ಇದರಿಂದ ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಲು ವಿಫಲವಾಗಿದ್ದು ಸರ್ಕಾರವನ್ನು ವಜಾ ಮಾಡಬೇಕು ಎಂದು ಅವರು ಕಿಡಿಕಾರಿದ್ದಾರೆ.
ತನಿಖೆ ಸಿಬಿಐಗೆ ವಹಿಸಿಸಲಿ: ದಾಳಿ ಕುರಿತು ಸರ್ಕಾರ ಸಿಓಡಿ ತನಿಖೆ ನಡೆಸುತ್ತೇವೆ ಎಂದಿರುವುದು ಕಣ್ಣೀರೊರೆಸುವ ತಂತ್ರ. ರಾಜ್ಯ ಸರ್ಕಾರದ ಹಿಡಿತದಲ್ಲಿರುವ ಸಿಓಡಿಯಿಂದ ನಿಷ್ಪಕ್ಷಪಾತ ತನಿಖೆ ನಡೆಸುವುದು ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದೇ ಸೂಕ್ತ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
|