ಜಿಲ್ಲೆಯ ಕೆಲ ಪ್ರದೇಶಗಳನ್ನು ಅಕ್ರಮವಾಗಿ ಆಂಧ್ರಪ್ರದೇಶಕ್ಕೆ ಸೇರಿಸಲಾಗುತ್ತಿದೆ ಎಂಬ ಮಾಜಿ ಸಚಿವ ದಿವಾಕರ್ ಬಾಬು ಆರೋಪವನ್ನು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತಳ್ಳಿ ಹಾಕಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿವಾಕರ್ ಬಾಬು ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದ್ದಾಗಿದ್ದು, ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿ ನೇಮಕವಾಗಿರುವ ನನಗೆ ಜಿಲ್ಲೆಯ ಅಭಿವೃದ್ಧಿ ಕುರಿತು ಹಲವು ಕನಸುಗಳಿವೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ದೊರೆಯಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
|