ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶ ಇದೀಗ ಸರ್ಕಾರಕ್ಕೆ ಮುಳ್ಳಿನ ಹಾಸಿಗೆಯಾಗಿ ಪರಿಣಮಿಸಿದೆ.
ಈ ಸಂಬಂಧ ಪಾಲಿಕೆ ಚುನಾವಣೆಯಲ್ಲಿ ಮುಂದೂಡಲು ಸಕಲ ರೀತಿಯ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ಕ್ಷೇತ್ರ ಮರುವಿಂಗಡಣೆ ಮೀಸಲಾತಿ ಗೊಂದಲಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಮುಂದೂಡುವ ತಂತ್ರಕ್ಕೆ ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ನಡೆಯಲಿರುವ 8 ವಿಧಾನಸಭಾ ಉಪಚುನಾವಣೆ ಬಳಿಕ ಪಾಲಿಕೆ ಚುನಾವಣೆಯನ್ನು ನಡೆಸುವುದು ಸೂಕ್ತ ಎಂಬುದು ಸರ್ಕಾರದ ಅಭಿಪ್ರಾಯ. ಈ ನಿಟ್ಟಿನಲ್ಲಿ ಚುನಾವಣೆ ಕನಿಷ್ಠ ಆರು ತಿಂಗಳುಗಳ ಕಾಲ ಮುಂದೂಡಲು ತೀರ್ಮಾನಿಸಿದೆ.
ಈಗಾಗಲೇ ಮಳೆ ಅರ್ಭಟ, ರೈತರ ಗೋಲಿಬಾರ್ ಪ್ರಕರಣ, ಚರ್ಚ್ ಮೇಲಿನ ದಾಳಿ ಸೇರಿದಂತೆ ಹಲವು ವಿಚಾರಗಳ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದರಿಂದ ಇದು ಚುನಾವಣೆ ಮೇಲೆ ಪರಿಣಾಮ ಬೀರಬಹುದೆಂಬುದು ಬಿಜೆಪಿ ನಾಯಕರ ಲೆಕ್ಕಚಾರವಾಗಿದೆ. ಈ ನಿಟ್ಟಿನಲ್ಲಿ ಬರುವ ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.
|