ರಾಜ್ಯದ ವಿವಿಧೆಡೆಗಳಲ್ಲಿ ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ಕುರಿತು ಕೇಂದ್ರ ಸರ್ಕಾರ ರಾಜ್ಯಕ್ಕೆ ಎಚ್ಚರಿಕೆ ನೀಡಿರುವುದು ರಾಜಕೀಯ ಪ್ರೇರಿತವಾದದ್ದಾಗಿದೆ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಕಟುವಾಗಿ ಟೀಕಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪತ್ರ ಬರೆದು ವರದಿ ಕೇಳುವ ಅಗತ್ಯವಿರಲಿಲ್ಲ. ಕೇಂದ್ರದ ಪತ್ರದ ಹಿಂದೆ ರಾಜಕೀಯ ಕೈವಾಡವಿರುವುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಅಗತ್ಯಬಿದ್ದರೆ ರಾಜ್ಯ ಸರ್ಕಾರವೇ ಕೇಂದ್ರಕ್ಕೆ ಪತ್ರ ಬರೆದು ವಿವರಣೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಏತನ್ಮಧ್ಯೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸಂವಿಧಾನದ ನಿಯಮದಂತೆ ಕೇಂದ್ರ ಸರ್ಕಾರ ಬರೆದಿರುವ ಪತ್ರಕ್ಕೆ ಅಗತ್ಯ ಬಿದ್ದರೆ ಸೂಕ್ತ ಉತ್ತರ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಘಟನೆಯ ಕುರಿತು ವಿವರಣೆ ನೀಡಿದ ಅವರು, ಇಂತಹ ಘಟನೆಗಳು ಮರುಕಳಿಸಿದರೆ ಜಿಲ್ಲಾ ವರಿಷ್ಠರೇ ನೇರ ಹೊಣೆಯಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
|