ಪ್ರಾರ್ಥನಾ ಮಂದಿರಗಳ ದಾಳಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ನೀಡಿರುವ ಎಚ್ಚರಿಕೆ ತುಂಬಾ ತಡವಾಗಿದ್ದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾರ್ಥನಾ ಮಂದಿರದ ಮೇಲಿನ ದಾಳಿ ಕುರಿತು ಕೇಂದ್ರ ಸರ್ಕಾರಕ್ಕೆ ರಾಜ್ಯಕ್ಕೆ ನೀಡಿರುವ ಎಚ್ಚರಿಕೆಯನ್ನು ಈ ಮೊದಲೇ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.
ಮುಂದೆ ಕೂಡ ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಿದರೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾವನ್ನು ವಜಾಗೊಳಿಸಬೇಕೆಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಜಿಲ್ಲೆಯ ತಿಪಟೂರಿಗೆ ಭೇಟಿ ನೀಡಿರುವುದನ್ನು ಬಿಜೆಪಿ ನಾಯಕರು ಟೀಕಿಸಿರುವುದು ಸರಿಯಲ್ಲ ಎಂದು ಆಕ್ರೋಶಗೊಂಡ ಅವರು, ಇದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
|