ಎಲ್ಲಾ ವಾಣಿಜ್ಯ ವಾಹನಗಳಿಗೆ ವೇಗ ನಿಯಂತ್ರಕವನ್ನು ಅಳವಡಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಸೆ.30ರ ಮಧ್ಯರಾತ್ರಿಯಿಂದ ಲಾರಿ ಸೇರಿದಂತೆ ಎಲ್ಲಾ ವಾಣಿಜ್ಯ ವಾಹನಗಳ ಮುಷ್ಕರ ನಡೆಸಲು ಕರ್ನಾಟಕ ಲಾರಿ ಮಾಲೀಕರ ಒಕ್ಕೂಟ ನಿರ್ಧರಿಸಿದೆ.
ಒಕ್ಕೂಟದ ಪದಾಧಿಕಾರಿಗಳು ಹಾಗೂ ವಾಣಿಜ್ಯ ಉದ್ದೇಶದ ವಾಹನಗಳ ಮಾಲೀಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಬಿ.ಚೆನ್ನಾರೆಡ್ಡಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಎಲ್ಲಾ ವಾಣಿಜ್ಯ ವಾಹನಗಳಿಗೆ ಈ ತಿಂಗಳ 30ರ ಒಳಗೆ ಸ್ಪೀಡ್ ಗವರ್ನರ್ ಅಳವಡಿಸಬೇಕು ಎಂಬ ಆದೇಶವನ್ನು ಹಿಂತೆಗೆದುಕೊಳ್ಳಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ತನಗಿರುವ ಅಧಿಕಾರವನ್ನು ಬಳಸಿಕೊಂಡು ವೇಗ ನಿಯಂತ್ರಕ ಆದೇಶವನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಷ್ಕರ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
|