ಚರ್ಚ್‌ಗಳ ಮೇಲಿನ ದಾಳಿಯ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಮಂಗಳವಾರ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಿರಂತರವಾಗಿ ಚರ್ಚ್‌ಗಳ ಮೇಲೆ ದಾಳಿ ನಡೆಸುತ್ತಿದ್ದರೂ, ಇದನ್ನು ನಿಭಾಯಿಸುವ ಶಕ್ತಿ ಸರ್ಕಾರಕ್ಕಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಮುಂದೆ ಕೂಡ ಇದೇ ರೀತಿಯಲ್ಲಿ ಸರ್ಕಾರ ನಡೆದುಕೊಂಡರೆ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತುಕೊಳ್ಳುವುದು ತರವೇ ಎಂದು ಪ್ರಶ್ನಿಸಿದ ಅವರು, ಈ ನಿಟ್ಟಿನಲ್ಲಿಯೇ ಕೇಂದ್ರದ ತಂಡ ರಾಜ್ಯಕ್ಕೆ ಆಗಮಿಸಿದೆ ಎಂದು ವಿವರಿಸಿದರು.
ಇದೇ ವೇಳೆ ಬಿಜೆಪಿ ಶತದಿನಗಳ ದುರಾಡಳಿತದ ಪುಸ್ತಕವನ್ನು ಬಿಡುಗಡೆ ಮಾಡಿದ ಅವರು, ರಾಜ್ಯದ ಘನತೆ, ಗೌರವ ನಶಿಸಿಹೋಗಿದ್ದು, ಈ ಕುರಿತು ಜನತೆಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
|