ರಾಜ್ಯದಲ್ಲಿನ ಚರ್ಚ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಶಂಕಿತರನ್ನು ರಾಜ್ಯ ಸರ್ಕಾರ ಇನ್ನೂ ಬಂಧಿಸಿಲ್ಲ. ಕೂಡಲೇ ಬಂಧಿಸುವ ಕಾರ್ಯ ಕೈಗೊಳ್ಳಬೇಕು ಎಂದು ಮಂಗಳವಾರ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತನಿಖಾ ತಂಡ ಆಭಿಪ್ರಾಯ ವ್ಯಕ್ತಪಡಿಸಿದೆ.
ದಾಳಿ ಕುರಿತು ಸರ್ಕಾರ ಸ್ವಲ್ಪ ಮುಂಜಾಗ್ರತೆ ವಹಿಸಬೇಕಿತ್ತು ಎಂದು ತಿಳಿಸಿರುವ ಕೇಂದ್ರ ತನಿಖಾ ತಂಡ, ಸೂಕ್ತ ಭದ್ರತೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದೆ.
ಈ ಕುರಿತು ಮಾಹಿತಿ ನೀಡಿರುವ ತನಿಖಾ ತಂಡದ ಮುಖ್ಯಸ್ಥ ಕುಮಾವತ್, ಮಂಗಳೂರು ಹಾಗೂ ಬೆಂಗಳೂರು ಚರ್ಚ್ ಮೇಲಿನ ದಾಳಿಯಲ್ಲಿ ಸಾಮ್ಯತೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.
ಈ ದಾಳಿಯ ಹಿಂದೆ ಹಿಂದೂ ಸಂಘಟನೆಗಳ ಕೈವಾಡವಿರುವುದು ಸ್ಪಷ್ಟವಾಗಿದೆ. ಈ ನಿಟ್ಟಿನಲ್ಲಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸುವ ಕಾರ್ಯ ನಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.
ನಗರದ ಮರಿಯಣ್ಣನ ಪಾಳ್ಯದ ಚರ್ಚ್‌ಗೆ ಭೇಟಿ ನೀಡಿದ ತಂಡ ಪರಿಶೀಲನೆ ನಡೆಸಿದೆ.
|