ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿಯನ್ನು ಖಂಡಿಸಿ ನಗರದಲ್ಲಿ ಬುಧವಾರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದಾಳಿಗೊಳಗಾದ ಮರಿಯಣ್ಣನ ಪಾಳ್ಯ ಚರ್ಚ್ ಬಳಿಯಿಂದ ರಾಜಭವನದವರೆಗೆ ಬೃಹತ್ ರಾಲಿ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ 26 ಕಡೆಗಳಲ್ಲಿ ಚರ್ಚ್ ಗಳ ಮೇಲೆ ದಾಳಿನಡೆದಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ವೈಫಲ್ಯವೇ ಕಾರಣ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣೇಭೈರೇಗೌಡ, ಅಲ್ಪಸಂಖ್ಯಾತರ ಹಿತ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೆರಳಿದಾಗ ಪ್ರವೇಶ ನಿರಾಕರಿಸಿದ ಪೊಲೀಸರು ಕೃಷ್ಣೇಭೈರೇಗೌಡ ಸೇರಿದಂತೆ ಹಲವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.
|