ಮೂರು ತಿಂಗಳೊಳಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿರದ ಕುರಿತು ಮಾಜಿ ಮೇಯರ್ ಪಿ.ಆರ್. ರಮೇಶ್ ಇದೀಗ ಹೈಕೊರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲದೆ, ಚುನಾವಣೆಯನ್ನು ಮುಂದೂಡಬೇಕೆಂದು ಸರ್ಕಾರ ಸಲ್ಲಿಸಿರುವ ಅರ್ಜಿ ಪ್ರಶ್ನಿಸಿ ರಮೇಶ್ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಬಿಬಿಎಂಪಿ ಚುನಾವಣೆಯನ್ನು ಮೂರು ತಿಂಗಳೊಳಗೆ ನಡೆಸಬೇಕೆಂಬ ಹೈಕೋರ್ಟ್ ನಿರ್ದೇಶನವನ್ನು ಸರ್ಕಾರ ಪಾಲಿಸುತ್ತಿಲ್ಲ. ಇದುವರೆಗೂ ಯಾವುದೇ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಿಲ್ಲ ಎಂದು ಅರ್ಜಿಯಲ್ಲಿ ದೂರಿದ್ದಾರೆ.
ಹೈಕೊರ್ಟ್ ಗೆ ಸರ್ಕಾರ ಸಲ್ಲಿಸಿರುವ ಅರ್ಜಿಯ ಕುರಿತು ವಿವರಣೆ ನೀಡಬೇಕೆಂದು ತಿಳಿಸಿರುವ ಅವರು, 20 ತಿಂಗಳಿನಿಂದ ಯಾವುದೇ ಜನಪ್ರತಿನಿಧಿ ಸರ್ಕಾರಗಳು ಇಲ್ಲದಿರು ವುದರಿಂದ ಮಹಾನಗರ ಪಾಲಿಕೆಯಲ್ಲಿನ ಅಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿವೆ. ಈ ನಿಟ್ಟಿನಲ್ಲಿ ಶೀಘ್ರವೇ ಚುನಾವಣೆ ನಡೆಸುವಂತೆ ಅರ್ಜಿಯಲ್ಲಿ ಅವರು ಆಗ್ರಹಿಸಿದ್ದಾರೆ.
|