ಕೆಪಿಸಿಸಿ ಅಧ್ಯಕ್ಷಗಾದಿ ಆಕಾಂಕ್ಷಿಯಲ್ಲ:ಸಿದ್ದರಾಮಯ್ಯ
|
|
|
|
ಬೆಂಗಳೂರು, ಶುಕ್ರವಾರ, 26 ಸೆಪ್ಟೆಂಬರ್ 2008( 11:00 IST )
|
|
|
|
|
|
|
|
ಕೆಪಿಸಿಸಿ ಅಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ ನೇಮಕಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಇದೀಗ ಅಸಮಾಧಾನದ ಹೊಗೆಯಾಡತೊಡಗಿದೆ.
ದೇಶಪಾಂಡೆ ಆಯ್ಕೆಯನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲ್ನೋಟಕ್ಕೆ ಸ್ವಾಗತಿಸಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿಬರತೊಡಗಿದೆ.
ಆದರೆ ಈ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ನಾನು ಈ ಸ್ಥಾನದ ಅಕಾಂಕ್ಷಿಯೇ ಅಲ್ಲ. ಹೀಗಾಗಿ ದೇಶಪಾಂಡೆ ನೇಮಕದ ವಿರುದ್ಧ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹೈಕಮಾಂಡ್ ತನ್ನ ಅಧಿಕಾರ ಚಲಾಯಿಸಿರುವ ಬಗ್ಗೆ ನನಗೆ ಬೇಸರವಿಲ್ಲ ಎಂದು ತಿಳಿಸಿದ ಅವರು, ಮುಂದೆ ಕೂಡ ಕಾಂಗ್ರೆಸ್‌ನಲ್ಲಿಯೇ ಮುಂದುವರಿಯಲು ಇಚ್ಛಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಏತನ್ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಮಾಜಿ ಸಚಿವ ಎಚ್. ಆರ್. ವಿಶ್ವನಾಥ, ಅರಕಲಗೂಡು ಶಾಸಕ ಎ.ಮಂಜು ಸೇರಿದಂತೆ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
|
|
|
|