ಬೆಂಗಳೂರು: ಕೋಮುವಾದ ಹಿಮ್ಮೆಟ್ಟಬೇಕಾದರೆ ಜಾತ್ಯತೀತ ಪಕ್ಷಗಳು ಒಗ್ಗೂಡಬೇಕೆಂದು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳು ಒಗ್ಗೂಡಿ ಕಣಕ್ಕಿಳಿಯಬೇಕೆಂದು ಕರೆ ನೀಡಿದರು.
ದೇವೇಗೌಡರ ಜೊತೆ ಮೈತ್ರಿ ಪ್ರಸ್ತಾಪವನ್ನು ಸ್ವಾಗತಿಸಿದ ದೇಶಪಾಂಡೆ, ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ತಪ್ಪು ನಿರ್ಧಾರದಿಂದ ಬಿಜೆಪಿ ಆಡಳಿತಕ್ಕೆ ಬರುವಂತಾಯಿತು. ಈ ಬಗ್ಗೆ ಎಚ್ಚೆತ್ತುಕೊಂಡು ಮುಂದುವರಿಯಬೇಕಿದೆ. ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದರು.
|