ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ವಂಚಿತಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದ್ದು,ಪಕ್ಷದಲ್ಲಿ ಅಸಮಾಧಾನ ಹೊಗೆಯಾಡದಂತೆ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿದೆ.
ಅಧ್ಯಕ್ಷಗಾದಿ ನೀಡದಿರುವ ಬಗ್ಗೆ ಅಸಮಾಧಾನಗೊಂಡಿರುವ ಸಿದ್ದರಾಮಯ್ಯನವರಿಗೆ ಪ್ರತಿಪಕ್ಷದ ನಾಯಕ ಹುದ್ದೆ ನೀಡುವ ಚಿಂತನೆ ಹೈಕಮಾಂಡ್ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಹಾಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಪಕ್ಷದ ರಾಷ್ಟ್ರೀಯ ಜವಾಬ್ದಾರಿ ಅಥವಾ ಕೇಂದ್ರ ಸಚಿವ ಸ್ಥಾನ ನೀಡುವ ಕುರಿತು ಚಿಂತನೆ ನಡೆಸಿರುವ ಕಾಂಗ್ರೆಸ್ ನಾಯಕರು ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯನವರೇ ಸೂಕ್ತ ವ್ಯಕ್ತಿ ಎಂಬುದು ಅವರ ಅಭಿಪ್ರಾಯ. ಈ ಕುರಿತಾದ ಪ್ರಕಟಣೆ ಸದ್ಯದಲ್ಲಿಯೇ ಹೊರಬೀಳುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
|