ಗುಲ್ಬರ್ಗಾದ ಯಾದಗಿರಿಯನ್ನು ನೂತನ ಜಿಲ್ಲೆಯನ್ನಾಗಿ ರಚನೆ ಮಾಡುವ ಸಂಬಂಧ ಕಲ್ಬರ್ಗಿಯಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರವನ್ನು ವಿರೋಧಿಸಿ ಶನಿವಾರ ಶಹಾಪುರ ಬಂದ್ ಆಚರಿಸಲಾಯಿತು.
ಬಂದ್ ವೇಳೆ ಪ್ರತಿಭಟನಾಕಾರರು ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿ, ಜಖಂಗೊಳಿಸಿದ್ದು ಪಟ್ಟಣದಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಶಹಾಪುರ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್‌ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪಟ್ಟಣದಾದ್ಯಂತ ಅಂಗಡಿ-ಮುಂಗಟ್ಟುಗಳು, ಶಾಲಾ-ಕಾಲೇಜುಗಳು ಮುಚ್ಚಿದ್ದವು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಹೋರಾಟ ಸಮಿತಿಯ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿದ್ದರಲ್ಲದೆ, ಕೆಲವೆಡೆ ಬಸ್ಸುಗಳಿಗೆ ಕಲ್ಲು ತೂರಿ ಜಖಂಗೊಳಿಸಲಾಗಿದೆ.ಕೆಲವಡೆ ಬೆಂಕಿ ಹಚ್ಚಿದ ಪ್ರಕರಣಗಳೂ ನಡೆದಿದೆ.
|