ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ರೆಡ್ಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ರೆಡ್ಡಿ
ಕರ್ನಾಟಕ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ನಗರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಮೂಲಕ ರಾಜ್ಯದ ಬೊಕ್ಕಸಕ್ಕೆ ಅಪಾರ ಹಣ ಬರಲಿದ್ದು, ಇದನ್ನು ಇನ್ನಷ್ಟು ಬಲಪಡಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿದೇಶಿ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಪ್ರವಾಸಿ ತಾಣಗಳನ್ನು ಆಕರ್ಷಕವಾಗಿ ಮಾಡಲು ನೂತನ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.

ಅಲ್ಲದೆ, ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅರ್ಥಪೂರ್ಣವಾಗಿ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಬಾಂಬ್ ಪತ್ತೆಗೆ ವಿಶೇಷ ತಂಡ
ಗುಪ್ತಚರ ಇಲಾಖೆಯಿಂದ ಫೋನ್ ಕದ್ದಾಲಿಕೆ:ಉಗ್ರಪ್ಪ
ನೋಕಿಯಾ ಯುವತಿ ನೇಣಿಗೆ ಶರಣು
ಶಹಾಪುರ ಬಂದ್ ಯಶಸ್ವಿ
ಬಿಜೆಪಿ ನಪುಂಸಕ ಸರ್ಕಾರ: ಕುಮಾರಸ್ವಾಮಿ
ನೂತನ ಜಿಲ್ಲೆ ಘೋಷಣೆಗೆ ಖರ್ಗೆ ಸ್ವಾಗತ