ನಗರದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜಾಪುರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ಸಂದರ್ಭ ಮಹತ್ವದ ಅಂಶಗಳು ಹೊರಬಿದ್ದಿವೆ.
ನಿಷೇಧಿತ ಸಿಮಿ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಮೊಹಮದ್ ಸಮಿ ಬಂಧಿತ ಆರೋಪಿ. ಆರೋಪಿಯನ್ನು ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ತೀವ್ರ ವಿಚಾರಣೆಗೊಳಪಡಿಸಿರುವ ಪೊಲೀಸರು, ನಗರದಲ್ಲಿ ನಡೆದಿರುವ ಸರಣಿ ಬಾಂಬ್ ಸ್ಫೋಟದಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದನು ಎಂದು ತಿಳಿದು ಬಂದಿದೆ.
ಬಿಜಾಪುರದ ಚನ್ನಕೇಶವ ನಗರ ನಿವಾಸಿ ಅಹಮ್ಮದ್ ಬಾಗೇವಾಡಿ ಎಂಬವರ ಮಗನಾದ ಆರೋಪಿ, ಬಿಜಾಪುರದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಅಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
|