ಕೆಪಿಸಿಸಿ ನೂತನ ಅಧ್ಯಕ್ಷರಾದ ಆರ್. ವಿ. ದೇಶಪಾಂಡೆ ಅವರು ಅಕ್ಟೋಬರ್ 6ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಚುನಾವಣೆ ರಣಕಹಳೆ ಮೊಳಗಿಸಲಿದೆ ಎಂದು ಅವರು ಹೇಳಿದರು.
ಮೈತ್ರಿ:ಹೈಕಮಾಂಡ್ ನಿರ್ಧಾರವೇ ಅಂತಿಮ: ಮುಂದಿನ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಖರ್ಗೆ ತಿಳಿಸಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಒಂದು ವೇಳೆ ಮೈತ್ರಿ ಕುರಿತು ಹೈಕಮಾಂಡ್ ಬಯಸಿದ್ದಲ್ಲಿ, ಯಾವುದೇ ಅಭ್ಯಂತರವಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. |
|