ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಮಂಗಳವಾರ ಬೆಳಿಗ್ಗೆ 10-50ಕ್ಕೆ ಸಿದ್ದಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ್ ಸ್ವಾಮೀಜಿಯವರು ಚಾಮುಂಡಿಬೆಟ್ಟದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.
ಸಾಂಸ್ಕೃತಿಕ ನಗರದಾದ್ಯಂತ ಪ್ರವಾಸಿಗರ ಮಹಾಪೂರವೇ ತುಂಬಿದ್ದು,ಎಲ್ಲೆಡೆ ಶೃಂಗಾರದಿಂದ ಕಂಗೊಳಿಸುತ್ತಿರುವ ದಸರಾಕ್ಕೆ ಇಂದು ಚಾಲನೆ ದೊರೆತಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಮೈಸೂರು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿಯ ದಸರಾಕ್ಕೆ ಸುಮಾರು 10 ಕೋಟಿ ರೂಪಾಯಿಗಳ ನೆರವು ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತ ತಿಳಿಸಿದರು.
ಅಲ್ಲದೇ ಜಾಗತಿಕ ಮಟ್ಟದಲ್ಲಿ ಮೈಸೂರು ದಸರಾಕ್ಕೆ ವಿಶಿಷ್ಟ ಮೆರಗು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರ್ಣಪ್ರಮಾಣದ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. |
|