ರಾಜ್ಯದಲ್ಲಿ ಅನೇಕ ಪ್ರಯೋಗಗಳನ್ನು ಮಾಡಿ ವಿಫಲರಾಗಿರುವ ದೇವೇಗೌಡರ ಆತ್ಮವಿಶ್ವಾಸ ಕುಗ್ಗಿದೆ. ಹಾಗಾಗಿ ಅವರು ಕಾಂಗ್ರೆಸ್ ಬಾಗಿಲು ಬಡಿಯುತ್ತಿದ್ದಾರೆ ಎಂದು ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಪ್ರಾಧಿಕಾರ ಹಮ್ಮಿಕೊಂಡಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ವೇಳೆ ಮಾತನಾಡಿದ ಅವರು, ದೇವೇಗೌಡರಿಗೆ ಸ್ವಂತ ಶಕ್ತಿಯ ಮೇಲೆ ಹೋರಾಡಲು ಸಾಧ್ಯವಾಗುತ್ತಿಲ್ಲ. ಅದರಿಂದಾಗಿ ಒಡೆದ ಮನೆಯಂತಾಗಿರುವ ಕಾಂಗ್ರೆಸ್ ಪಕ್ಷದ ನಾಯಕರ ಮುಂದೆ ಅಂಗಲಾಚುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ. ಮುಖಂಡರು ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದಿಲ್ಲ. ಅಲ್ಲಿ ಬಹಳಷ್ಟು ಮಂದಿ ಆಕಾಂಕ್ಷಿಗಳಿದ್ದಾರೆ. ಸದ್ಯದಲ್ಲೇ ನಡೆಯಲಿರುವ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು. |
|