ಈಜಿಪುರ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೆವರಿಕ್ ಸಂಸ್ಥೆಯಿಂದ ಭಾರೀ ಉಡುಗೊರೆ ಪಡೆದಿದ್ದಾರೆ ಎಂಬ ಆರೋಪ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈಜಿಪುರದಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆಯನ್ನು ಮೆವರಿಕ್ ಸಂಸ್ಥೆಗೆ ಗುತ್ತಿಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು 50ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಕುಮಾರಸ್ವಾಮಿ ಮಂಗಳವಾರ ಬಹಿರಂಗವಾಗಿ ಆರೋಪಿಸಿ, ಅದಕ್ಕೆ ಸಂಬಂಧಿಸಿದ ದಾಖಲೆಗಳು ತನ್ನ ಬಳಿ ಇರುವುದಾಗಿಯೂ ತಿಳಿಸಿದ್ದರು.
ಈ ರೀತಿ ಆಪಾದನೆ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿಗಳ ಚಾರಿತ್ರ್ಯವಧೆಗೆ ಪ್ರಯತ್ನಿಸಿದ್ದಾರೆ.ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಿಆರ್‌ಪಿ 199ನೆ ಕಾನೂನಿನ್ವಯ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದೆ.
ಇದಕ್ಕಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರನ್ನು ನೇಮಿಸಲಾಗುವುದು ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. |
|