ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಈಜಿಪುರ ಪ್ರಕರಣ ಲೋಕಾಯುಕ್ತ ತನಿಖೆಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಈಜಿಪುರ ಪ್ರಕರಣ ಲೋಕಾಯುಕ್ತ ತನಿಖೆಗೆ
ವಿವಾದಕ್ಕೆ ಒಳಗಾಗಿರುವ ಮೆವರಿಕ್ ಸಂಸ್ಥೆಯ ‘ಈಜಿಪುರ’ ಮತ್ತು ಗರುಡಾ ಮಾಲ್’ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಪ್ರತಿಪಕ್ಷಗಳ ಆರೋಪಕ್ಕೆ ಸರ್ಕಾರ ತಿರುಗೇಟು ನೀಡಿದಂತಾಗಿದೆ.

ಈಜಿಪುರದಲ್ಲಿ ಆರ್ಥಿಕ ದುರ್ಬಲರಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಮೆವರಿಕ್ ಸಂಸ್ಥೆಗೆ ಕಾಮಗಾರಿ ಗುತ್ತಿಗೆ ವಹಿಸಲು ಕಳೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲಂಚದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈಗ ಲೋಕಾಯುಕ್ತ ತನಿಖೆ ನಡೆಸಲು ನಿರ್ಧರಿಸಿದೆ.

ಈ ನಡುವೆ ಈಜಿಪುರ ವಸತಿ ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರ ವಿರುದ್ಧ 50 ಕೋಟಿ. ರೂ. ಲಂಚದ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲು ಸರ್ಕಾರ ನಿರ್ಧರಿಸಿದೆ.

ಈ ಎರಡು ಪ್ರಕರಣದ ಕುರಿತು ಲೋಕಾಯುಕ್ತ ತನಿಖೆಗೆ ಆದೇಶಿಸಿರುವ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಸರ್ಕಾರ ಇರುವಾಗ ಕೈಗೊಂಡ ತೀರ್ಮಾನಗಳ ಕುರಿತು ತನಿಖೆ ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ
ಮೈಸೂರು: ಒಡೆಯರ್ 'ದರ್ಬಾರ್'ಗೆ ಚಾಲನೆ
ಗಡುವು ವಿಸ್ತರಣೆ: ಲಾರಿ ಮುಷ್ಕರ ವಾಪಸ್
ಬಿಬಿಎಂಪಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ತಾತ್ಕಾಲಿಕ ಲೋಡ್‌ ಶೆಡ್ಡಿಂಗ್: ಈಶ್ವರಪ್ಪ
ಮತಾಂತರವನ್ನೇಕೆ ಖಂಡಿಸುತ್ತಿಲ್ಲ: ಚಿ.ಮೂ. ಕಿಡಿ