ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಎಚ್‌ಡಿಕೆ ಹೇಳಿಕೆ ಪ್ರತಿಕ್ರಿಯೆ ಇಲ್ಲ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಚ್‌ಡಿಕೆ ಹೇಳಿಕೆ ಪ್ರತಿಕ್ರಿಯೆ ಇಲ್ಲ: ಯಡಿಯೂರಪ್ಪ
ಈಜಿಪುರ ಪ್ರಕರಣ ಸೇರಿದಂತೆ ಹಿಂದಿನ ಸರ್ಕಾರದಲ್ಲಿ ನಡೆದಿರುವ ಪ್ರಕರಣಗಳನ್ನು ತನಿಖೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಈಗ ರಾಜಕೀಯ ವಲಯದಲ್ಲಿ ತಿಕ್ಕಾಟಕ್ಕೆ ಎಡೆ ಮಾಡಿಕೊಟ್ಟಿದೆ.

ಮೆವರಿಕ್ ಸಂಸ್ಥೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ 50 ಕೋಟಿ. ರೂ. ಲಂಚ ಪಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಅಧಿವೇಶನ ಕರೆಯುವಂತೆ ಬೇಡಿಕೆ ಇಟ್ಟಿರುವುದನ್ನು ಒಪ್ಪಿಕೊಳ್ಳುತ್ತೇನೆ. ಅದು ಒಳ್ಳೆಯ ಸಲಹೆ. ಆದರೆ ಅವರು ಮತ್ತು ಅವರ ಕುಟುಂಬದ ಸದಸ್ಯರು ಕೆಲ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ ಎಂದು ತಿಳಿಸಿದರು.

ಏತನ್ಮಧ್ಯೆ, ಕುಮಾರಸ್ವಾಮಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ವಕ್ತಾರ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳು ತಮ್ಮಲ್ಲಿರುವ ದೋಷವನ್ನು ಇತರರಲ್ಲಿ ಹುಡುಕು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಸರ್ಕಾರ ಅಥವಾ ಮುಖಂಡರು ಅವ್ಯವಹಾರ ನಡೆಸಿದ ದಾಖಲೆಗಳಿದ್ದರೆ ಅದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ ಅವರು, ಕೈಲಾಗದವರು ಮೈ ಪರಚಿ ಕೊಂಡರು ಎಂಬಂತೆ ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಸದಸ್ಯರು ಸಹಜವಾಗಿಯೇ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯಡಿಯೂರಪ್ಪ ನಾಲಿಗೆ ಮೇಲೆ ಹಿಡಿತವಿರಲಿ: ದೇಶಪಾಂಡೆ
ಮೌಲ್ಯ ವರ್ಧಿತ ತೆರಿಗೆ ಇಲ್ಲ: ಅಶೋಕ್
ಮೊಕದ್ದಮೆಗೆ ಹೆದರಲಾರೆ: ಕುಮಾರಸ್ವಾಮಿ
ಭಯೋತ್ಪಾದನಾ ನಿಗ್ರಹಕ್ಕೆ ಕೇಂದ್ರ ಅಡ್ಡಿ:ಆಚಾರ್ಯ
ಸಚಿವ ರೆಡ್ಡಿ ವಿರುದ್ಧ ದೂರು:ಎಸ್‌ಐ ಎತ್ತಂಗಡಿ
ಸಿದ್ದಗಂಗಾಶ್ರೀಗೆ ಬಸವ ಪುರಸ್ಕಾರ