ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜೆಡಿಎಸ್ ನಿಂದ ಕಲ್ಪನಾ ಸಿದ್ದರಾಜು ಕಣಕ್ಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜೆಡಿಎಸ್ ನಿಂದ ಕಲ್ಪನಾ ಸಿದ್ದರಾಜು ಕಣಕ್ಕೆ
ಮದ್ದೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ದಿವಂಗತ ಸಿದ್ದರಾಜು ಅವರ ಪತ್ನಿ ಕಲ್ಪನಾ ಸಿದ್ದರಾಜು ಅವರನ್ನು ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರು ಉಪಚುನಾವಣೆಯಲ್ಲಿ ಕಲ್ಪನಾ ಸಿದ್ದರಾಜು ಅವರಿಗೆ ಟಿಕೇಟ್ ನೀಡಲು ಪಕ್ಷ ನಿರ್ಧರಿಸಿದ್ದು, ಗೆಲುವಿಗೆ ಕಾರ್ಯಕರ್ತರು ಒಗ್ಗೊಟ್ಟಿನಿಂದ ಶ್ರಮಿಸಬೇಕೆಂದು ಕರೆ ನೀಡಿದರು.

ಈ ಕುರಿತು ಮದ್ದೂರಿನಲ್ಲಿ ಇದೇ 9ರಂದು ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಪಡೆಯುತ್ತೇನೆ ಎಂದು ತಿಳಿಸಿದ ಅವರು, ಸಿದ್ದರಾಜು ಅವರ ಸ್ಥಾನದಲ್ಲಿ ನಿಂತು ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಅವರು ತಿಳಿಸಿದರು.

ಇದೇ ವೇಳೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಪ್ರತಿಪಕ್ಷಗಳ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರುವ ಮುಖ್ಯಮಂತ್ರಿಗಳಿಗೆ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದಸರಾಗೆ ಉಗ್ರರ ಕರಿನೆರಳು
ಭಜರಂಗದಳದ ಮಹೇಂದ್ರ ಕುಮಾರ್ ರಾಜೀನಾಮೆ
ಪಾಲಿಕೆ ಚುನಾವಣೆಗೆ ಸರ್ಕಾರ ಸಿದ್ಧ: ಅಶೋಕ್
ಎಚ್‌ಡಿಕೆ ಹೇಳಿಕೆ ಪ್ರತಿಕ್ರಿಯೆ ಇಲ್ಲ: ಯಡಿಯೂರಪ್ಪ
ಯಡಿಯೂರಪ್ಪ ನಾಲಿಗೆ ಮೇಲೆ ಹಿಡಿತವಿರಲಿ: ದೇಶಪಾಂಡೆ
ಮೌಲ್ಯ ವರ್ಧಿತ ತೆರಿಗೆ ಇಲ್ಲ: ಅಶೋಕ್