ಅಕ್ರಮವಾಗಿ ಶೇಖರಿಸಿಟ್ಟಿದ್ದ ಜೆಲಿಟಿನ್ ನಿಗೂಢ ರೀತಿಯಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.
ಜಿಲ್ಲೆಯ ರಾಮದುರ್ಗದ ಭಟಕುರ್ಕಿ ಗ್ರಾಮದಲ್ಲಿ ಇಂದು(ಗುರುವಾರ) ಈ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಕುಸಿತಗೊಂಡಿದೆ.
ಗಣಿಗಾರಿಕೆ ಸಂದರ್ಭದಲ್ಲಿ ಬಳಸುವ ಜೆಲಿಟಿನ್ ಗಳು ಇದಾಗಿದ್ದು, ಅಕ್ರಮವಾಗಿ ಶೇಖರಿಸಿಡಲಾಗಿತ್ತು ಎನ್ನಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಭಯೋತ್ಪಾದಕರ ಹಾವಳಿ ಹೆಚ್ಚಾಗುತ್ತಿರುವುದರಿಂದ ಸ್ಥಳೀಯ ಜನತೆ ಈ ಘಟನೆಯಿಂದ ಆತಂಕಗೊಂಡಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು ಈ ಘಟನೆಗೆ ಜನತೆ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. |