ಇತ್ತೀಚೆಗೆ ರಾಜ್ಯದ ವಿವಿಧೆಡೆ ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ಕೋರಿ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು ಈ ಪ್ರಕರಣದ ಕುರಿತು ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಕ್ಯಾಥೋಲಿಕ್ ಕ್ರಿಶ್ಚಿಯನ್ ಸಂಘಟನೆಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ತನಿಖೆಯನ್ನು ಸಿಬಿಐಗೆ ವಹಿಸಲು ಮನವಿ ಮಾಡಿದೆ.
ಅರ್ಜಿಯ ಪರಿಶೀಲನೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದ್ದು, ವಿಚಾರಣೆ ಮುಂದೂಡಿದೆ. ರಾಜ್ಯದ ವಿವಿಧೆಡೆಗಳಲ್ಲಿ ಚರ್ಚ್ ಮೇಲಿನ ದಾಳಿಯಿಂದಾಗಿ ಸಾಕಷ್ಟು ಹಾನಿ ಸಂಭವಿಸಿತ್ತು. |