ರಾಜ್ಯದಲ್ಲಿ ಕಾಂಗ್ರೆಸ್ ಸೋಲು ಅನುಭವಿಸಲು ಪಕ್ಷದ ಗುಂಪುಗಾರಿಕೆಯೇ ಪ್ರಮುಖ ಕಾರಣ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಕೆಪಿಸಿಸಿ ಕಟ್ಟಡದ ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಯ ಉಸ್ತುವಾರಿ ವಹಿಸಿಕೊಂಡ ನಾನು ಸೋತಿಲ್ಲ. ಆದರೆ ನನ್ನನ್ನು ಸೋಲಿಸಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಪಕ್ಷದಲ್ಲಿನ ಭಿನ್ನಾಭಿಪ್ರಾಯವಿರುವುದನ್ನು ಒಪ್ಪಿಕೊಂಡಿದ್ದಾರೆ.
ಇದೀಗ ಹೊಸ ಅಧ್ಯಕ್ಷರು, ಪದಾಧಿಕಾರಿಗಳು ನೇಮಕಗೊಳ್ಳುತ್ತಿದ್ದಾರೆ. ಎಲ್ಲರೂ ಪಕ್ಷದ ಏಳಿಗೆಗಾಗಿ ಏಕತೆಯಿಂದ ದುಡಿಯುವಂತೆ ಅವರು ಮನವಿ ಮಾಡಿದರು.
ಈ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ 20 ಸ್ಥಾನಗಳನ್ನು ಪಡೆಯಬಹುದಾಗಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ. |