ನಾಮಪತ್ರ ಸಲ್ಲಿಸುವಾಗ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವುದು ಸಾಬೀತಾಗಿದ್ದು, ಬಂದರು ಸಚಿವ ಆನಂದ್ ಅಸ್ನೋಟಿಕರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೇಲ್ಮನೆ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ.
ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಆನಂದ್ ನಾಮಪತ್ರ ಸಲ್ಲಿಸುವಾಗ ಆಸ್ತಿ ವಿವರ ಘೋಷಣೆಯ ಪ್ರಮಾಣಪತ್ರದಲ್ಲಿ ಸುಳ್ಳು ವಿವರ ನೀಡಿರುವುದನ್ನು ದೃಢಪಡಿಸಿ ಚುನಾವಣಾಧಿಕಾರಿಯಾಗಿದ್ದ ಕಾರವಾರ ತಹಶೀಲ್ದಾರ್ ವಿಜಯ ಮಹಾಂತೇಶ್ ಅವರು ಕಳೆದ ಸೆ.26ರಂದು ವರದಿ ನೀಡಿ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಿರುವ ಪತ್ರವನ್ನು ಕೂಡಾ ಉಗ್ರಪ್ಪ ಸುದ್ದಿಗಾರರಿಗೆ ತೋರಿಸಿದರು.
ಸಚಿವ ಆನಂದ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿ ಮುಂದಾಗಬೇಕು ಎಂದರು. |