ತಾಲೂಕಿನ ವಿಟ್ಲದಲ್ಲಿ ಅನುಮಾನಸ್ಪಾದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ಆತನಿಂದ ಎರಡು ಚೀಲ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಈತನನ್ನು ಪೊಲೀಸರಿಗೆ ಒಪ್ಪಿಸುವಲ್ಲಿ ಸಾರ್ವಜನಿಕರು ಸಹಾಯ ಮಾಡಿರುವುದಾಗಿ ತಿಳಿಸಿದ್ದಾರೆ.
ಈತನ ಚೀಲದಲ್ಲಿ ಪತ್ತೆಯಾದ ಸ್ಫೋಟಕಗಳು ಗಣಿಗಾರಿಕೆಗೆ ಬಳಸುವಂತಾಗಿವೆ. ವಿಟ್ಲ ಬಸ್ ನಿಲ್ದಾಣದ ಬಳಿ ತಿರುಗುತ್ತಿದ್ದ ವೇಳೆ ಆತನನ್ನು ಬಂಧಿಸಲಾಗಿದೆ. ಬಂಧಿತನನ್ನು ಕೇರಳದ ಬಾಯಾರು ನಿವಾಸಿ ಉಮ್ಮರ್ ಎಂದು ಗುರುತಿಸಲಾಗಿದೆ.
ಶುಕ್ರವಾರ ಮಂಗಳೂರಿನಲ್ಲಿ ಬಂಧಿಸಲಾದ ಉಗ್ರರನ್ನು ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಪೊಲೀಸ್ ವಶಕ್ಕೆ ಒಪ್ಪಿಸಲಾಗುವುದು. ಕರಾವಳಿಯಲ್ಲಿ ಉಗ್ರರ ಜಾಲದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು, ಅವರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಪ್ರತಿಭಟನೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದೆ. ಸರ್ಕಾರ ರಾಜ್ಯದಲ್ಲಿ ಶಾಂತಿ ಕಾಪಾಡಲು ವಿಫಲವಾಗಿದೆ. ಕ್ಷುಲಕ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಪ್ರತಿಭಟನಾಕಾರರು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. |