ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ ಹೆಸರಿನಲ್ಲಿ ವಿವಿ ಸ್ಥಾಪನೆ:ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ ಹೆಸರಿನಲ್ಲಿ ವಿವಿ ಸ್ಥಾಪನೆ:ಯಡಿಯೂರಪ್ಪ
ರಾಜ್ಯದಲ್ಲಿ ಡಾ|ರಾಜ್ ಕುಮಾರ್ ಅವರ ಹೆಸರಿನಲ್ಲಿ ಸಿನಿಮಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಏರ್ಪಡಿಸಿದ್ದ ಕಾನ್ಫಿಡಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ ಕುಮಾರ್ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಚಲನಚಿತ್ರೋದ್ಯಮದ ಗಣ್ಯರೊಂದಿಗೆ ಶೀಘ್ರವೇ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಾ| ರಾಜ್ ಸ್ಮಾರಕಕ್ಕೆ 5 ಕೋಟಿ ರೂಪಾಯಿ ನೀಡಲಾಗುವುದು. ಈಗಾಗಲೇ 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.

ಅಲ್ಲದೆ, ಚಲನಚಿತ್ರ ಅಕಾಡೆಮಿ ಸ್ಥಾಪನೆ ಬಗ್ಗೆ ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ. ಚಿತ್ರರಂಗದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದ್ದು, ಅಗತ್ಯ ಸವಲತ್ತುಗಳನ್ನು ಒದಗಿಸುತ್ತದೆ ಎಂದು ಅವರು ಭರವಸೆ ನೀಡಿದರು.

ಇದೇ ವೇಳೆ ನಿರ್ದೇಶನ ಮತ್ತಿತರ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಿಂದೂ ಧರ್ಮದ ಲೋಪ ಸರಿಪಡಿಸಿ:ರೇವಣಶ್ರೀ
ದೇಶಪಾಂಡೆ-ಡಿಕೆಶಿ ಇಂದು ಪಟ್ಟಾಭಿಷೇಕ
ಬಂಧಿತ ಉಗ್ರರು ನಗರ ಸ್ಫೋಟದಲ್ಲೂ ಭಾಗಿ !
ಕುಮಾರಸ್ವಾಮಿ ಸರ್ಕಾರಕ್ಕೆ ಮತ್ತೆ ಸವಾಲ್
ಮಂಡ್ಯ:ಗಾಂಧಿ ಪ್ರತಿಮೆ ತೆರವು-ಪರಿಸ್ಥಿತಿ ಉದ್ವಿಗ್ನ
ಕುಮಾರಸ್ವಾಮಿ ಕ್ಷಮೆಯಾಚನೆಗೆ ಕಟ್ಟಾ ಆಗ್ರಹ