ಗೋಕಾಕ್ ಜಿಲ್ಲೆಗಾಗಿ ಆಗ್ರಹಿಸಿ ಸೋಮವಾರ ಗೋಕಾಕ್ ಜಿಲ್ಲಾ ಹೋರಾಟ ಸಮಿತಿ ಬಂದ್‌ಗೆ ಕರೆ ನೀಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗೋಕಾಕ್ ಪ್ರತ್ಯೇಕ ಜಿಲ್ಲಾ ರಚನೆಯ ಕೂಗು ಮತ್ತಷ್ಟು ಬಲಗೊಂಡಿರುವ ಹಿನ್ನೆಲೆಯಲ್ಲಿ, ಇಂದು ಬಂದ್‌ಗೆ ಕರೆ ನೀಡಿದ್ದು,ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಬೆಂಬಲ ಸೂಚಿಸಿವೆ.
ಸಂಚಾರ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಂಡಿದ್ದು, ಶಾಲಾ-ಕಾಲೇಜಿಗೆ ರಜೆ ಸಾರಲಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.ಅಲ್ಲದೇ ಜಿಲ್ಲಾ ಹೋರಾಟಕ್ಕೆ ಬೆಂಬಲ ಸೂಚಿಸಿರುವ ವಕೀಲರು ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿದ್ದಾರೆ.
ಹಲವಾರು ಸಮಸ್ಯೆಗಳಿಂದ ತೊಳಲಾಡುತ್ತಿರುವ ಗೋಕಾಕ್ ಅನ್ನು ಜಿಲ್ಲೆಯನ್ನಾಗಿ ಮಾಡುವಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿ ಬಂದ್ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಹೋರಾಟ ಸಮಿತಿ ತಿಳಿಸಿದೆ.
ಈ ಮೊದಲು ಸರ್ಕಾರ ನೇಮಿಸಿದ್ದ ಗದ್ದಿ ಗೌಡರ್ ಸಮಿತಿ ಕೂಡ ಗೋಕಾಕ್ ಅನ್ನು ಜಿಲ್ಲೆಯನ್ನಾಗಿ ಮಾಡಬಹುದಾಗಿದೆ ಎಂಬುದಾಗಿಯೂ ಸಲಹೆ ನೀಡಿದೆ.
ಆದರೆ ಗೋಕಾಕ್ ಜಿಲ್ಲೆಯನ್ನಾಗಿ ಮಾಡಿದರೆ, ಬೆಳಗಾವಿ-ಗೋಕಾಕ್ ಭಾಗದ ಕನ್ನಡಿಗರಿಗೆ ಅನ್ಯಾಯ ಮಾಡಿದಂತಾಗುವ ಮೂಲಕ ಮರಾಠಿಗರ ಪ್ರಾಬಲ್ಯ ಹೆಚ್ಚಳವಾಗಬಹುದು ಎಂಬ ಆತಂಕ ರಾಜಕೀಯ ನಾಯಕರದ್ದು, ಆ ನಿಟ್ಟಿನಲ್ಲಿ ಗೋಕಾಕ್ ಜಿಲ್ಲಾ ರಚನೆಗೆ ಅಡ್ಡಿ ಉಂಟಾಗಿದೆ. |