ರಾಜ್ಯ ಉಗ್ರರ ಅಡಗುತಾಣವಾಗುತ್ತಿದೆ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಇದೀಗ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಬಂಧಿತ ಉಗ್ರರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಪೊಲೀಸರು ರಾಜಧಾನಿ ಬೆಂಗಳೂರಿಗೆ ಕರೆತಂದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಮೆಹಬೂಬ್ ನಗರದಲ್ಲಿ ಬಂಧಿಸಲಾಗಿರುವ ಶಂಕಿತ ಉಗ್ರರ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ. ಭದ್ರತೆ ದೃಷ್ಟಿಯಿಂದ ಉಗ್ರರ ಹೆಸರನ್ನು ಬಹಿರಂಗ ಪಡಿಸಲಾಗುತ್ತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ಪೊಲೀಸರಿಂದ ತನಿಖೆ ಚುರುಕು: ಏತನ್ಮಧ್ಯೆ, ಸರಣಿ ಬಾಂಬ್ ಸ್ಫೋಟದ ತನಿಖೆಯನ್ನು ಚುರುಕುಗೊಳಿಸಿರುವ ಮಂಗಳೂರು ಪೊಲೀಸರು ಶಂಕಿತ ಉಗ್ರ ಅಹ್ಮದ್ ಬಾವಾ ಮನೆಯ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ, ಚಿಕ್ಕಮಗಳೂರಿನ ಕೊಪ್ಪದ ವಿಟ್ಲಮಕ್ಕಿಯಲ್ಲಿರುವ ಶಂಕಿತ ಉಗ್ರನ ಮನೆಗೆ ಭೇಟಿ ನೀಡಿರುವ ಪೊಲೀಸರು ಡೈರಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. |