ಚರ್ಚ್ ಮೇಲಿನ ದಾಳಿ ಕುರಿತು ರಾಜ್ಯ ಸರ್ಕಾರ ಕೈಗೊಂಡಿರುವ ನ್ಯಾಯಾಂಗ ತನಿಖೆ ಕೇವಲ ಕಣ್ಣೊರೆಸುವ ತಂತ್ರ ಎಂದು ಸಿಪಿಎಂನ ಪೊಲಿಟ್ ಬ್ಯುರೋ ಸದಸ್ಯೆ ಬೃಂದಾ ಕಾರಟ್ ಆರೋಪಿಸಿದ್ದಾರೆ.
ನಗರದಲ್ಲಿ ಸೋಮವಾರ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಪ್ರಕರಣದ ಕುರಿತು ಸೆರೆಹಿಡಿದಿರುವ ವೀಡಿಯೋ ದೃಶ್ಯಗಳನ್ನು ವೀಕ್ಷಿಸಿದರೂ, ದಾಳಿಗೆ ಕಾರಣರಾದವರನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.
ಅಲ್ಲದೆ, ಇದಕ್ಕೆ ಕುಮ್ಮಕ್ಕು ನೀಡಿದ ಪೊಲೀಸ್ ಅಧಿಕಾರಿಗಳನ್ನು ಶೀಘ್ರದಲ್ಲಿ ಬಂಧಿಸುವ ಕಾರ್ಯ ಆಗಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಗುಜರಾತ್ ಹತ್ಯಕಾಂಡದ ಕುರಿತು ನಾನಾವತಿ ಆಯೋಗ ಸಲ್ಲಿಸಿರುವ ವರದಿಯಂತೆ ರಾಜ್ಯ ಸರ್ಕಾರ ನೇಮಕ ಮಾಡಿರುವ ಆಯೋಗದ ತಂಡದ ವರದಿ ಹೊರಬೀಳಲಿದೆ ಎಂಬ ಆತಂಕ ವ್ಯಕ್ತಪಡಿಸಿದ ಅವರು, ಈ ಕುರಿತು ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿದ್ದಾರೆ. |