ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗೆ ವಿರೋಧ ಪಕ್ಷಗಳು ಅಡ್ಡಿ ಮಾಡುತ್ತಿವೆ ಎಂದು ಸಂಸದ ಅನಂತ್ ಕುಮಾರ್ ಆರೋಪಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷ ಅಭಿವೃದ್ಧಿ ಕಾಮಗಾರಿಗೆ ಪೂರಕವಾಗಿ ನಡೆಯಬೇಕೆ ಹೊರತು ಮಾರಕವಾಗಬಾರದು ಎಂದು ತಿಳಿಸಿದ್ದಾರೆ.
ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಹಿಂದಿನ ಪಕ್ಷಗಳು ಮಾಡಿರುವ ತಪ್ಪುಗಳನ್ನು ಸರಿದೂಗಿಸಿಕೊಂಡು ಸರ್ಕಾರ ಮುಂದುವರಿಯುತ್ತಿದೆ. ಹಿಂದಿನ ಸರ್ಕಾರಗಳು ಸಮಸ್ಯೆಗಳ ಸರಮಾಲೆಯನ್ನೇ ಸೃಷ್ಟಿಸಿದ್ದಾರೆ. ಇದರಿಂದ ಯೋಜನೆಗಳು ಕಾರ್ಯರೂಪಕ್ಕೆ ಬರುವಲ್ಲಿ ಸ್ವಲ್ಪ ವಿಳಂಬವಾಗಿದ್ದರೂ, ಸೂಕ್ತ ಸಮಯಕ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. |