ಬೆಂಗಳೂರು ಮೈಸೂರು ಕಾರಿಡಾರ್ (ಬಿಎಂಐಸಿ) ಯೋಜನೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಹಿಂದಿನ ಸರ್ಕಾರ ನೇಮಿಸಿರುವ ತನಿಖಾ ಸಮಿತಿಯನ್ನು ಸರ್ಕಾರ ರದ್ದುಗೊಳಿಸಿದೆ.
ಕುಮಾರಸ್ವಾಮಿ ಸರ್ಕಾರದಲ್ಲಿ ನೇಮಿಸಲಾಗಿದ್ದ ನ್ಯಾಯಮೂರ್ತಿ ಬಿ.ಸಿ.ಪಟೇಲ್ ನೇತೃತ್ವದ ತನಿಖಾ ಸಮಿತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸುವ ತೀರ್ಮಾನವನ್ನು ಮಂಗಳವಾರ ನಡೆದ ಸಚಿವ ಸಂಪುಟದಲ್ಲಿ ಕೈಗೊಳ್ಳಾಗಿದೆ.
ಸಚಿವ ಸಂಪುದಲ್ಲಿ ಕೈಗೊಂಡಿರುವ ತೀರ್ಮಾನಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ, ಮೆಟ್ರೋ ಕಾಮಗಾರಿಗೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ಗಳಲ್ಲಿ ಮೆಟ್ರೋ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಸ್ವಯಂ ಘೋಷಿತ ಪದ್ದತಿ ಜಾರಿಗೆ ತರುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಸುಗ್ರಿವಾಜ್ಞೆ ಮೂಲಕ ನಗರದಲ್ಲಿ ಸ್ವಯಂ ಘೋಷಿತ ಪದ್ದತಿ ಜಾರಿಗೆ ತರಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ 4850 ಹುದ್ದೆ ಖಾಲಿಯಾಗಿದೆ ಎಂದು ತಿಳಿಸಿದ ಅವರು, ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಉಪನ್ಯಾಸಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. |