ಶಾರದಾ ಮಹೋತ್ಸವದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನತೆಯಿಂದು ಕೂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷುಲಕ ಕಾರಣಕ್ಕಾಗಿ ನಡೆದ ಘರ್ಷಣೆಯಿಂದ ಗ್ರಾಮದಲ್ಲಿ ಪರಿಸ್ಥಿತಿ ಬಿಗಾಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಬಂದೋ ಬಸ್ತ್ ಏರ್ಪಡಿಸಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಡೆದಿರುವ ಹಿಂಸಾತ್ಮಕ ಘಟನೆ ಹಿನ್ನೆಲೆಯಲ್ಲಿ ನಿಗಾ ವಹಿಸಿರುವ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಹದ್ದಿನ ಕಣ್ಣಿಟ್ಟಿದ್ದಾರೆ. |