ಜಾತ್ಯತೀತ ಪಕ್ಷಗಳ ವಿಭಜನೆಯೇ ಕಾಂಗ್ರೆಸ್ ಪಕ್ಷದ ಸೋಲಿಗೆ ಕಾರಣ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಆರ್. ವಿ. ದೇಶಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೂಲಕ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷ ತೊರೆದಿರುವ ನಾಯಕರು ಮರಳಿ ಬರುವುದಾದರೆ ಸ್ವಾಗತ ಕೋರುವುದಾಗಿ ತಿಳಿಸಿದ ಅವರು, ಮುಂದಿನ ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ದೇಶಪಾಂಡೆ, ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. |