ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ಸಿಗರೇ ಕಾರಣ ಎಂಬ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆ ಹೈಕಮಾಂಡ್ ಕೆಂಗೆಣ್ಣಿಗೆ ಗುರಿಯಾಗಿದ್ದು,ಅದಕ್ಕೆ ವಿವರಣೆ ಕೇಳಿ ಇದೀಗ ನೋಟಿಸ್ ಜಾರಿ ಮಾಡಲಾಗಿದೆ.
ಹೇಳಿಕೆ ಕುರಿತು ತರಾಟೆಗೆ ತೆಗೆದುಕೊಂಡಿರುವ ಹೈಕಮಾಂಡ್ ವಿವರಣೆ ನೀಡುವಂತೆ ಖರ್ಗೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ಕಾರ್ಯಕಾರಿ ಸಮಿತಿ ಇರುವಾಗ ಬಹಿರಂಗ ಸಭೆಯಲ್ಲಿ ಈ ರೀತಿ ಹೇಳಿಕೆ ನೀಡಿರುವುದರ ಬಗ್ಗೆ ಹೈಕಮಾಂಡ್ ಅವರನ್ನು ಕೆರಳಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಪಕ್ಷದ ಹಿನ್ನಡೆಗೆ ಕಾರಣವಾಗುತ್ತದೆ ಎಂಬುದು ನಾಯಕರ ಅಂಬೋಣ.
ದೊಡ್ಡಬಳ್ಳಾಪುರದಲ್ಲಿ ನಡೆದ ಕೆಪಿಸಿಸಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಖರ್ಗೆ, ಪಕ್ಷದ ಅಧಿಕಾರಕ್ಕೆ ಬರುವಲ್ಲಿ ಹಾಗೂ ಪ್ರಮುಖ 37 ನಾಯಕರು ಸೋಲು ಕಾಣಲು ಕಾಂಗ್ರೆಸ್ಸಿಗರೇ ಕಾರಣ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. |